Greater Bengaluru News9 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಾಳೆ ಐಪಿಎಲ್ ಮ್ಯಾಚ್ ಹಿನ್ನೆಲೆ ಈಗಾಗಲೇ ಅಗತ್ಯ ಕ್ರಮಗಳನ್ನು ಆಯೋಜಕರು ಮತ್ತು ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್ಸಿಎಲ್ ಈಗಾಗಲೇ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ಮಾಡಿರುವ ನಡುವೆ, ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಜನಸಂದಣಿ ನಿಯಂತ್ರಣದ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬಿಎಂಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದ್ದು, 8 ಬಸ್ಗಳು ಓಡಾಟ ನಡೆಸಲಿವೆ.
ಬಸ್ ಸಂಚರಿಸಲಿರುವ ಮಾರ್ಗಗಳು
- ಚಿನ್ನಸ್ವಾಮಿ ಸ್ಟೇಡಿಯಂ ಟು ಕಾಡುಗೋಡಿ ಬಸ್ ನಿಲ್ದಾಣ, HAL ರಸ್ತೆ
- ಚಿನ್ನಸ್ವಾಮಿ ಸ್ಟೇಡಿಯಂ ಟು ಸರ್ಜಾಪುರ
- ಚಿನ್ನಸ್ವಾಮಿ ಸ್ಟೇಡಿಯಂ ಟು ಎಲೆಕ್ಟ್ರಾನಿಕ್ ಸಿಟಿ
- ಚಿನ್ನಸ್ವಾಮಿ ಸ್ಟೇಡಿಯಂ ಟು ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
- ಚಿನ್ನಸ್ವಾಮಿ ಸ್ಟೇಡಿಯಂ ಟು ಜನಪ್ರಿಯ ಟೌನ್ಶಿಪ್, ಮಾಗಡಿ ರಸ್ತೆ
- ಚಿನ್ನಸ್ವಾಮಿ ಸ್ಟೇಡಿಯಂ ಟು ಆರ್.ಕೆ.ಹೆಗಡೆ ನಗರ, ಯಲಹಂಕ
- ಚಿನ್ನಸ್ವಾಮಿ ಸ್ಟೇಡಿಯಂ ಟು ಹೊಸಕೋಟೆ
- ಚಿನ್ನಸ್ವಾಮಿ ಸ್ಟೇಡಿಯಂ ಟು ಬನಶಂಕರಿ
ಈ ವಿಶೇಷ ಬಿಎಂಟಿಸಿ ಬಸ್ಗಳು ಸಿ.ಟಿ.ಒ ಜಂಕ್ಷನ್ನಿಂದ ಬಿ.ಆರ್.ವಿ ಜಂಕ್ಷನ್ ವರೆಗೆ ರಸ್ತೆಯ ಎಡ ಭಾಗದಲ್ಲಿ ನಿಲುಗಡೆಯಾಗಲಿದೆ. ಸಾರ್ವಜನಿಕರು ಈ ವ್ಯವಸ್ಥೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.
ಸುರಕ್ಷತೆ ದೃಷ್ಟಿಯಿಂದ ಕ್ರೀಡಾಂಗಣಕ್ಕೆ ಅಭಿಮಾನಿಗಳು ಕೆಲ ವಸ್ತುಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ದಯವಿಟ್ಟು ನಿರ್ಬಂಧಿತ ವಸ್ತುಗಳನ್ನು ತರದೇ, ಸುರಕ್ಷತಾ ತಪಾಸಣೆಯ ಸಿಬ್ಬಂದಿಗಳೊಂದಿಗೆ ಸಹಕರಿಸಿ ಎಂದೂ ಪೊಲೀಸರು ಮನವಿ ಮಾಡಿದ್ದಾರೆ. ಸಂಶಯಾಸ್ಪದ ವಸ್ತುಗಳು ಕಂಡಿಬಂದಲ್ಲಿ ಅವನ್ನು ವಶಕ್ಕೆ ಪಡೆಯುವುದಾಗಿಯೂ ಮುನ್ನೆಚ್ಚರಿಕೆ ನೀಡಲಾಗಿದೆ.


