BBMP
Loading ...

Darshan

ಬೆಂಗಳೂರು: ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಮತ್ತೆ ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ವಕೀಲರ ಮೂಲಕ ಅರ್ಜಿಯನ್ನು ಸಲ್ಲಿಸಿದ್ದಾರೆ.

ನಿನ್ನೆ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದಂತ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿದ್ದಂತ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇಂದು ತಮ್ಮ ಪರ ವಕೀಲ ಸುನೀಲ್ ಮೂಲಕ ನಟ ದರ್ಶನ್ ಹೈಕೋರ್ಟ್ ಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ನಟ ದರ್ಶನ್ ಗೆ ಹೈಕೋರ್ಟ್ ನಿಂದಲಾದರೂ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ದೊರೆಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು! ಕೊನೆಗೂ ಸಿಕ್ತು ಬಿಗ್ ರಿಲೀಫ್

Leave a Reply

Your email address will not be published. Required fields are marked *