BBMP
Loading ...

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಪ್ರಕರಣದಲ್ಲಿ ನಟ ದರ್ಶನ್​ ಹಾಗೂ ಆತನ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ಜಾಮೀನು ಸಿಕ್ಕಿದ್ದರೂ ಆಗಾಗ ವಿಚಾರಣೆ ಎದುರಿಸಬೇಕಿದೆ.

ನಿಗದಿಯಂತೆ ಇಂದು ಕೂಡ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಪವಿತ್ರಾ ಸೇರಿದಂತೆ ಎಲ್ಲ ಆರೋಪಿಗಳು ಹಾಜರಾಗಿದ್ದರು. ಆದರೆ, ನಟ ದರ್ಶನ್​ ಮಾತ್ರ ಗೈರಾಗಿದ್ದರು. ಇದರಿಂದ ಗರಂ ಆದ ನ್ಯಾಯಾಧೀಶರು ನಟ ದರ್ಶನ್​ಗೆ ಎಚ್ಚರಿಕೆ ನೀಡಿದ್ದಾರೆ. ದರ್ಶನ್​ ಪರ ವಕೀಲರಿಗೆ ವಾರ್ನಿಂಗ್​ ಮಾಡಿ, ಪ್ರಕರಣದ ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಿದ್ದಾರೆ.

ಅನಾರೋಗ್ಯ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರು​ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಧೀಶರು ಯಾವುದೇ ಕಾರಣಕ್ಕೂ ಕೋರ್ಟ್ ವಿಚಾರಣೆಗೆ ಗೈರಾಗಬಾರದು ಎಂದು ಎಚ್ಚರಿಕೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.

ಜಾಮೀನಿನ ಮೇಲೆ ಹೊರಗಿರುವ ಕೊಲೆ ಆರೋಪಿ ದರ್ಶನ್, ಸದ್ಯ ಡೆವಿಲ್​ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ. ಇತ್ತೀಚೆಗಷ್ಟೇ ರಾಜಸ್ಥಾನದಲ್ಲಿ ಶೂಟಿಂಗ್​ ಮುಗಿಸಿ, ಚಿತ್ರತಂಡ ಬೆಂಗಳೂರಿಗೆ ಮರಳಿದೆ. ನಿರಂತರ ಶೂಟಿಂಗ್​ನಿಂದ ಅನಾರೋಗ್ಯ ಕಾಡಿದೆ ಎನ್ನಲಾಗುತ್ತಿದೆ. ಹೀಗಾಗಿ ಕೋರ್ಟಿಗೆ ಗೈರಾಗಿದ್ದಾರೆ ಎಂದು ಹೇಳಲಾಗಿದೆ.

ಇದರ ನಡುವೆ ಜಾಮೀನ ರದ್ದತಿ ಕೋರಿ ಬೆಂಗಳೂರು ಪೊಲೀಸರು ಸುಪ್ರಿಂಕೋರ್ಟ್​ ಮೊರೆ ಹೋಗಿದ್ದಾರೆ. ಏಪ್ರಿಲ್​ 2ರಂದು ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್​, ಏಪ್ರಿಲ್​ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಒಂದು ವೇಳೆ ಸುಪ್ರಿಂಕೋರ್ಟ್​ನಲ್ಲಿ ಜಾಮೀನು ರದ್ದಾದರೆ, ದರ್ಶನ್​ ಸೇರಿದಂತೆ ಎಲ್ಲ ಆರೋಪಿಗಳು ಮತ್ತೆ ಜೈಲು ಪಾಲಾಗಬೇಕಾಗುತ್ತದೆ.

ಪೊಲೀಸರಿಂದ ಹಲ್ಲೆ-ಕಿರುಕುಳ ಆರೋಪ: ವಿಧಾನಸೌಧದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸ್ಥಿತಿ ಗಂಭೀರ..!

Leave a Reply

Your email address will not be published. Required fields are marked *