BBMP
Loading ...

ಬೆಂಗಳೂರು : ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ಬರ್ಬರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಅವರ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ.

ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಸಹಾನಾ ಗಂಡು ಮಂಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದ್ದು, ಗಂಡು ಮಗುವಿನ ಜನನವಾಗಿದೆ. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ.

ಇಂದು ಬೆಳಗಿನ ಜಾವ 5 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ -ಮಗು ಆರೋಗ್ಯವಾಗಿದ್ದಾರೆ ಅಲ್ಲದೆ ಕೀರ್ತಿ ಆಸ್ಪತ್ರೆಯಿಂದ ಡಾ.ಮಲ್ಲಿಕಾರ್ಜುನ್ ಸಂಪೂರ್ಣ ಉಚಿತ ಚಿಕಿತ್ಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದ್ದು, ಸದ್ಯ ಇದುವರೆಗೂ ತನಿಖೆ ನಡೆಯುತ್ತಿದೆ.

ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲು: ಮಂಡ್ಯ ಸಹಕಾರ ಸಂಘದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆರೋಪ!

Leave a Reply

Your email address will not be published. Required fields are marked *