BBMP
Loading ...

ಬೆಂಗಳೂರು: ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್​ನ ಭದ್ರತಾ ಪಡೆಯ ಮೇಲ್ ಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಒಂದೇ ವಾರದಲ್ಲಿ ಇದು ಎರಡನೇ ಹುಸಿ ಬಾಂಬ್​ ಮೇಲ್ ಆಗಿದೆ. ಜೂ.13, 16ರಂದು ಎರಡು ಬಾಂಬ್​ ಬೆದರಿಕೆ ಇ-ಮೇಲ್ ಬಂದಿತ್ತು.

ಉಗ್ರ ಅಜ್ಮಲ್ ಕಸಬ್ ಗೆ ಗಲ್ಲು ಹಾಕಿದ್ದು ಸರಿಯಿಲ್ಲ ಅಂತಲು ಉಗ್ರನ ಹೆಸರಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಶೌಚಾಲಯದ ಪೈಪ್​ಲೈನ್​ನಲ್ಲಿ ಬಾಂಬ್ ಇಟ್ಟಿದ್ದು, ಪಝಲ್ ಗೇಮ್ ರೀತಿ ಎರಡು ಕಡೆ ಬಾಂಬ್ ಇಟ್ಟಿದ್ದು ಪ್ಲ್ಯಾನ್​ ಎ ಫೇಲ್​​ ಆದರೆ ಪ್ಲ್ಯಾನ್ ಬಿ’ ಎಂದು ಬೆದರಿಕೆ ಸಂದೇಶ ರವಾನಿಸಲಾಗಿದೆ.

ಬೆದರಿಕೆ ಮೇಲ್ ಹಿನ್ನೆಲೆ‌ ಎಲ್ಲೆಡೆ ಪರಿಶೀಲನೆ ಮಾಡಿದ ಅಧಿಕಾರಿಗಳು ಬಳಿಕ ಇದೊಂದು ಹುಸಿ ಬಾಂಬ್ ಮೇಲ್ ಎಂದು ತಿಳಿಸಿದ್ದಾರೆ. ಸದ್ಯ ಕೆಂಪೇಗೌಡ ಏರ್​​​ಪೋರ್ಟ್ ಪೊಲೀಸರು ಮತ್ತು ಅಧಿಕಾರಿಗಳಿಗೆ ಈ ಹುಸಿ‌ ಬಾಂಬ್ ಮೇಲ್ ಮತ್ತು ಕರೆಗಳು ತಲೆ ನೋವಾಗಿದ್ದು, ಹುಸಿ‌ ಬಾಂಬ್ ಬೆದರಿಕೆ ಬಂದ ಮೇಲ್ ಐಡಿಗಳ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ನಾವಿರುವವರೆಗೂ ಎಸ್ಕಾಂಗಳ ಖಾಸಗೀಕರಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

Leave a Reply

Your email address will not be published. Required fields are marked *