BBMP
Loading ...

PUC

Greater Bengaluru News9 : ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಈ ಬಾರಿ ದಾಖಲೆಯ ಹೆಚ್ಚಳವಾಗಿದೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ.

Leave a Reply

Your email address will not be published. Required fields are marked *