BBMP
Loading ...

sa-2

Greater Bengaluru News9: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮಾನನಷ್ಟ ಪ್ರಕರಣದಲ್ಲಿ ಹಿನ್ನಡೆಯಾಗಿದೆ. ಐಪಿಎಸ್ ಅಧಿಕಾರಿ ಡಿ . ರೂಪ ಮೌಡ್ಗಿಲ್ ದಾಖಲಿಸಿದ್ದ ಖಾಸಗಿ ದೂರನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ರೋಹಿಣಿ ಸಿಂಧೂರಿ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ರೂಪಾ ಮೌದ್ಗಿಲ್ ಅವರು, ರೋಹಿಣಿ ಸಿಂಧೂರಿ ಮಾಧ್ಯಮಗಳ ಮುಂದೆ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅದನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಈ ಪ್ರಕರಣಕ್ಕೆ ಮೊದಲು ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ವಿಚಾರಣೆಗೆ ತಡೆ ನೀಡಿ, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ಸಲಹೆ ನೀಡಿದ್ದರು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೂಲಕ ಮತ್ತೆ ವಿಚಾರಣಾ ನ್ಯಾಯಾಲಯಕ್ಕೆ ವಾಪಸ್ ಕಳುಹಿಸಲಾಗಿತ್ತು.

ಇದೀಗ ಈ ಪ್ರಕರಣವನ್ನು ರದ್ದುಪಡಿಸುವಂತೆ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ M. Nagaprasanna ಅವರಿದ್ದ ಹೈಕೋರ್ಟ್ ಪೀಠ ತಿರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ

2023ರ ಫೆಬ್ರವರಿ 19ರಂದು ರೋಹಿಣಿ ಸಿಂಧೂರಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಅವಹೇಳನಕಾರಿ ಆರೋಪಗಳಿವೆ ಎಂದು ರೂಪಾ ದೂರಿನಲ್ಲಿ ಉಲ್ಲೇಖಿಸಿದ್ದರು. ಆ ಹೇಳಿಕೆಯನ್ನು ‘ಎಕ್ಸ್’ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಸುಮಾರು 1.8 ಲಕ್ಷ ಮಂದಿ ವೀಕ್ಷಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಹೇಳಿಕೆಯ ಬಳಿಕ ತಮಗೆ ವರ್ಗಾವಣೆ ಆಗಿ, ಆರು ತಿಂಗಳ ಕಾಲ ಹುದ್ದೆ ರಹಿತ ಸ್ಥಿತಿ ಉಂಟಾಯಿತು ಹಾಗೂ ಸಂಬಳವಿಲ್ಲದೆ ಕೆಲಸದಿಂದ ದೂರವಿರಬೇಕಾಯಿತು. ಕುಟುಂಬದ ಸದಸ್ಯರು ಮಾನಸಿಕ ಯಾತನೆ ಅನುಭವಿಸಿದ್ದಾರೆ ಎಂದು ರೂಪಾ ಮೌದ್ಗಿಲ್ ಆರೋಪಿಸಿ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಮುಂದಿನ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರಿಯಲಿದೆ.

Leave a Reply

Your email address will not be published. Required fields are marked *