ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ(ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಎನ್. ಶಿವಶಂಕರ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಶಿವಶಂಕರ ಅವರನ್ನು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು.


