BBMP
Loading ...

NAMMA-METRO-2

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಕೊನೆಗೂ ಏರಿಕೆಯಾಗಿದ್ದು ಈ ಬಗ್ಗೆ BMRCL ಅಧಿಕೃತ ಆದೇಶ ಪ್ರಕಟಿಸಿದೆ.

ಪ್ರಯಾಣ ದರ ಶೇ.46 ರಷ್ಟು ಏರಿಕೆ ಮಾಡಲಾಗಿದೆ. ಪ್ರಯಾಣ ದರ ಕನಿಷ್ಠ 10 ರೂಗಳಿಂದ 90 ರೂಪಾಯಿಗಳವರೆಗೆ ಏರಿಕೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಪ್ರಯಾಣ ದರದ ಬಗ್ಗೆ ಚರ್ಚೆ ಸಭೆಗಳು ನಡೆದಿತ್ತು. 8 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಯಾಣ ದರ ಏರಿಕೆಯಾಗಿದೆ.

ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಿದ್ದ ಸಮಿತಿ ದೇಶದ ಇತರ ರಾಜ್ಯಗಳು, ಸಿಂಗಪುರದ ಮೆಟ್ರೋ ಪರಿಷ್ಕರಣೆ ಕ್ರಮವನ್ನು ಅಧ್ಯಯನ ಮಾಡಿ ದರ ಪರಿಷ್ಕರಣೆ ಮಾಡಿದೆ. 2017 ರಲ್ಲಿ 10% -15%ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಮೆಟ್ರೋ ಕಾಮಗಾರಿಗಾಗಿ ಸಾಲದ ಮೇಲಿನ ಬಡ್ಡಿ, ಕಾರ್ಯಾಚರಣೆ ವೆಚ್ಚ, ನಿರ್ವಹಣೆ ಮತ್ತು ಸಿಬ್ಬಂದಿ ವೇತನ ಮತ್ತಿತರ ವಿವಿಧ ವೆಚ್ಚ ಪ್ರತಿ ವರ್ಷ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂದು ಅಧಿಕಾರಿಗಳು ಹೇಳಿದ್ದರು.

ಇತ್ತೀಚೆಗೆ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿತ್ತು. ಈಗ ಅಂತಿಮವಾಗಿ ದರ ಏರಿಕೆ ಮಾಡಲಾಗಿದೆ. ವಿಶೇಷ ದಿನಗಳಲ್ಲಿ, ನಾನ್ ಪೀಕ್ ಅವರ್‌ಗಳಲ್ಲಿ, ಡಿಸ್ಕೌಂಟ್ ನೀಡಲು ಸಮಿತಿ ಶಿಫಾರಸು ಮಾಡಿದೆ.

ಪರಿಷ್ಕೃತ ದರ ಹೀಗಿದೆ

0-2 ಕಿಲೋ ಮೀಟರ್​​ ಪ್ರಯಾಣಕ್ಕೆ 10 ರೂ. ಏರಿಕೆ

2-4 ಕಿಲೋ ಮೀಟರ್​ ಪ್ರಯಾಣಕ್ಕೆ 20 ರೂ. ಏರಿಕೆ

4-6 ಕಿಲೋ ಮೀಟರ್​ ಪ್ರಯಾಣಕ್ಕೆ 30 ರೂ. ಏರಿಕೆ

6-8 ಕಿಲೋ ಮೀಟರ್​ ಪ್ರಯಾಣಕ್ಕೆ 40 ರೂ. ಏರಿಕೆ

8-10 ಕಿಲೋ ಮೀಟರ್​ ಪ್ರಯಾಣಕ್ಕೆ 50 ರೂ. ಏರಿಕೆ

10-15 ಕಿಲೋ ಮೀಟರ್​ ಪ್ರಯಾಣಕ್ಕೆ 60 ರೂ. ಏರಿಕೆ

15-20 ಕಿಲೋ ಮೀಟರ್​ ಪ್ರಯಾಣಕ್ಕೆ 70 ರೂ. ಏರಿಕೆ

20-25 ಕಿಲೋ ಮೀಟರ್​ ಪ್ರಯಾಣಕ್ಕೆ 80 ರೂ. ಏರಿಕೆ

25-30 ಕಿಲೋ ಮೀಟರ್​ ಪ್ರಯಾಣಕ್ಕೆ 90 ರೂ. ಏರಿಕೆ

30 ಕಿ.ಮೀ.​​ಕ್ಕಿಂತ ಹೆಚ್ಚಿನ ಪ್ರಯಾಣಕ್ಕೆ ಟಿಕೆಟ್ ದರ 90 ರೂ

ಸ್ಮಾರ್ಟ್​ ಕಾರ್ಡ್​​ನ ಮೇಲೆ 5 ರೂ. ರಿಯಾಯ್ತಿ ಮುಂದುವರಿಕೆ ಆಗಿದೆ. ಸ್ಮಾರ್ಟ್​​ ಕಾರ್ಡ್​​ನಲ್ಲಿ 50 ರೂ. ಮಿನಿಮಮ್​ ಹಣ ಇರಬೇಕಿತ್ತು. ಆದರೆ ಈಗ ಮಿನಿಮಮ್ 90 ರೂ. ಇರಲೇಬೇಕು. ಆ ಮೂಲಕ 40 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಆಫ್-ಪೀಕ್ ಸಮಯದಲ್ಲಿ ಪ್ರಯಾಣಕ್ಕಾಗಿ ಮೆಟ್ರೋ ವ್ಯವಸ್ಥೆಗೆ ಪ್ರವೇಶಿಸುವ ಸಮಯವನ್ನು ಆಧರಿಸಿ, ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಹೆಚ್ಚುವರಿ ಶೇ 5 ರಿಯಾಯಿತಿ ಶೇ 5 ಪೀಕ್ ಅವರ್ +ಶೇ 5 ಆಫ್ ಪೀಕ್ ಅವರ್-ಒಟ್ಟು ಶೇ 10 ರಿಯಾಯಿತಿ ನೀಡಲಾಗಿದೆ.

ಆಫ್-ಪೀಕ್ ಸಮಯ: ವಾರದ ದಿನಗಳಲ್ಲಿ, ಬೆಳಗೆ ಕಾರ್ಯಾಚರಣೆ ಆರಂಭದಿಂದ 8 ಗಂಟೆಯವರೆಗೆ, ಮಧ್ಯಾಹ 12 ಗಂಟೆಯಿಂದ 4 ಗಂಟೆಯವರೆಗೆ ಮತ್ತು ರಾತ್ರಿ 9 ಗಂಟೆಯಿಂದ ಕಾರ್ಯಾಚರಣೆ ಮುಕ್ತಾಯದವರೆಗೆ. ಎಲ್ಲಾ ಭಾನುವಾರ ಮತ್ತು ರಾಷ್ಟ್ರೀಯ ರಜಾದಿನಗ ಳಲ್ಲಿ (ಜನವರಿ 26, ಆಗಸ್ಟ್ 15, ಅಕ್ಟೋಬರ್ 02) ದಿನವಿಡೀ ಏಕರೂಪವಾಗಿ ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಶೇ 10% ರಿಯಾಯಿತಿ ನೀಡಲಾಗಿದೆ.

Leave a Reply

Your email address will not be published. Required fields are marked *