BBMP
Loading ...

Cilynder

Greater Bengaluru News9 : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಅನಿಲ ಪೂರೈಕೆಯ ಮೇಲೂ ಬೀಳತೊಡಗಿದೆ. ಈ ಹಿನ್ನೆಲೆಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ಗಳಿಗೆ ನೀಡಲಾಗುತ್ತಿದ್ದ ರಿಯಾಯಿತಿಗಳನ್ನು ಸ್ಥಗಿತಗೊಳಿಸಿರುವುದಾಗಿ Indian Oil Corporation Limited (ಐಒಸಿಎಲ್) ತಿಳಿಸಿದೆ.

ಕಂಪನಿಯ ನಿರ್ದೇಶನದ ಮೇರೆಗೆ 19 ಕೆಜಿ ಮತ್ತು 47.5 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ಗಳ ಮೇಲಿನ ಎಲ್ಲಾ ರಿಯಾಯಿತಿಗಳನ್ನು ಮುಂದಿನ ಅಧಿಸೂಚನೆಯವರೆಗೆ ರದ್ದುಗೊಳಿಸಲಾಗಿದೆ ಎಂದು Indane ಗ್ಯಾಸ್ ಡಿಸ್ಟ್ರಿಬ್ಯೂಟರ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಕಟಣೆಯ ಪ್ರಕಾರ, ಮಧ್ಯಪ್ರಾಚ್ಯದ ಭೌಗೋಳಿಕ ಹಾಗೂ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾದ ಅಸ್ಥಿರತೆ ಅನಿಲ ದರಗಳ ಮೇಲೂ ಪರಿಣಾಮ ಬೀರಬಹುದೆಂಬ ಅಂದಾಜಿದೆ.

ಸದ್ಯ ಬೆಂಗಳೂರಿನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ದರ ₹1,814 ಆಗಿದ್ದು, 47.5 ಕೆಜಿ ಸಿಲಿಂಡರ್ ₹4,532ಕ್ಕೆ ಮಾರಾಟವಾಗುತ್ತಿದೆ. ರಿಯಾಯಿತಿ ಸ್ಥಗಿತಗೊಂಡಿರುವುದರಿಂದ ಹೋಟೆಲ್ಗಳು ಹಾಗೂ ಇತರೆ ವಾಣಿಜ್ಯ ಬಳಕೆದಾರರಿಗೆ ದರ ಹೆಚ್ಚಳದ ಹೊರೆ ಬೀಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *