BBMP
Loading ...

Loka Raid

ಬೆಂಗಳೂರು: ಕರ್ನಾಟಕದ ಹಲವೆಡೆ ಬುಧವಾರದಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು (bangaluru), ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಆ ಮೂಲಕ ಶಾಕ್ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಸದ್ಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ.

IAS ಸೇರಿ ಮೂವರು ಅಧಿಕಾರಿ ಮನೆ ಮೇಲೆ ದಾಳಿ
ಬೆಂಗಳೂರಿನಲ್ಲಿ ಐಎಎಸ್​ ಸೇರಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾ ದಾಳಿ ಮಾಡಿದೆ. ಆರ್​.ಟಿ.ನಗರದಲ್ಲಿರುವ ಹಿರಿಯ IAS ಅಧಿಕಾರಿ ವಾಸಂತಿ ಅಮರ್​ ಮನೆ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಆರೋಪ ಕೇಳಿಬಂದಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ ಇವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್​​ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದೆ. ಅದೇ ರೀತಿಯಾಗಿ ಮೈಸೂರಿನ ಸಾತಗಳ್ಳಿಯ ಜೆಪಿನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಮನೆ ಮೇಲೂ ದಾಳಿ ಮಾಡಲಾಗಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪ ಕೇಳಿಬಂದಿದೆ.

ಬಳ್ಳಾರಿಯಲ್ಲಿ ಮೂರು ಕಡೆ ದಾಳಿ
ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ. ಬೆಂಗಳೂರು ಟೌನ್ ಮತ್ತು ರೂರಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸೇರಿದ 3 ಸ್ಥಳಗಳ ಮೇಲೆ ದಾಳಿ ಮಾಡಿರುವ ಬೆಂಗಳೂರು ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. ಬೆಂಗಳೂರು ನಿವಾಸಿಯಾಗಿರುವ ಅಧಿಕಾರಿ ಮಾರುತಿ ಬಗಲಿ ವಿರುದ್ಧ ರಾಜ್ಯದ ಹಲವೆಡೆ ಆಸ್ತಿ ಮಾಡಿರುವ ಆರೋಪ ಕೇಳಿಬಂದಿದೆ.

ಬೆಳ್ಳಂ ಬೆಳಿಗ್ಗೆ ಲೋಕಾ ಶಾಕ್​​: ಕಕ್ಕಾಬಿಕ್ಕಿಯಾದ ಅಧಿಕಾರಿ
ಇನ್ನು ಕೊಪ್ಪಳ ನಗರದಲ್ಲೂ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ಮಲಗಿದ್ದ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಉಪ ನಿದೇರ್ಶಕ ಶೆಕು ಚವ್ಹಾಣ್​ಗೆ ಶಾಕ್ ನೀಡಿದ್ದಾರೆ. ಲೋಕಾ ಅಧಿಕಾರಿಗಳನ್ನು ಶೆಕು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ. ​

ಲೋಕಾಯುಕ್ತ ಇನ್ಸ್‌ಪೆಕ್ಟರ್ ಸುನೀಲ ಮೇಗಳಮನಿ ನೇತೃತ್ವದಲ್ಲಿ ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಶೇಕು ಚವ್ಹಾಣ್​ಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲೂ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

5 ಪಾಲಿಕೆಯಾಗಿ ಬಿಬಿಎಂಪಿ ವಿಂಗಡಣೆ; ಗ್ರಾಮಾಂತರ ಭಾಗಗಳು ಗ್ರೇಟರ್​ ಬೆಂಗಳೂರು ವ್ಯಾಪ್ತಿಗೆ ಬರುತ್ತವೆಯೇ?ಉತ್ತರ ಇಲ್ಲಿದೆ….

Leave a Reply

Your email address will not be published. Required fields are marked *