BBMP
Loading ...

Siddaramaiah-fb-1024x576

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಎದ್ದಿದೆ. ಈ ಹೊತ್ತಿನಲ್ಲಿಯೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ.30ರಂದು ದೆಹಲಿಗೆ ದೌಡಾಯಿಸುತ್ತಿದ್ದಾರೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ನಡೆ ತೀವ್ರ ಕುತೂಹಲ ಮೂಡಿಸಿದೆ.

ಸಿಎಂ ಸಿದ್ಧರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜುಲೈ.30ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಗೆ ತೆರಳುತ್ತಿರುವುದಾಗಿ ತಿಳಿದು ಬಂದಿದೆ.

ಕಳೆದ ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ಧರಾಮಯ್ಯ ದೆಹಲಿಗೆ ತೆರಳಿದ್ದರು. ಕೇಂದ್ರದ ಸಚಿವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದ್ದರು. ಅನುಮತಿ, ಅನುಮೋದನೆ, ಅನುದಾನದ ಬಗ್ಗೆಯೂ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಮನವಿ ಮಾಡಿ ವಾಪಾಸ್ ಆಗಿದ್ದರು.

ಮತ್ತೆ ದರ ಏರಿಕೆ ಶಾಕ್‌: ಎಸ್ಕಾಂ ಆದಾಯ ಅಂತರ ಸರಿದೂಗಿಸಲು ಜನರ ಜೇಬಿಗೆ ಕತ್ತರಿ..?

Leave a Reply

Your email address will not be published. Required fields are marked *