BBMP
Loading ...

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು 17 ವರ್ಷಗಳ ಬಳಿಕ 18ನೇ ವರ್ಷಕ್ಕೆ ಐಪಿಎಲ್​ ಕಪ್ ಗೆದ್ದಿದೆ. ಈ ಸಂಭ್ರಮಾಚರಣೆ ಎಲ್ಲೆಡೆ ಮನೆ ಮಾಡಿರುವಾಗಲೇ ಭಾರೀ ದುರಂತ ಸಂಭವಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವಕ್ಕೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದರು.

ಕಾಲಿಡಲು ಸ್ಥಳವಿಲ್ಲದಷ್ಟು ಜಾಗ ಬಿಡದ ಕಾಲ್ತುಳಿತ ಸಂಭವಿಸಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​. ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ, ಘಟನೆ ಸಂಬಂಧ ಸಿಎಂ, ಡಿಸಿಎಂ ಸೇರಿ ಕೆಎಸ್ಸಿಎ ಅಧಿಕಾರಿಗಳ ವಿರುದ್ಧ ಕಬ್ಬನ್​ ಪಾರ್ಕ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲೇನಿದೆ?
ಜನಪ್ರಿಯ ಪ್ರಚಾರದ ರಾಜಕೀಯ ಲಾಭದ ಕಾರಣಕ್ಕಾಗಿ ಆರ್​ಸಿಬಿ ತಂಡದ ಆಟಗಾರರನ್ನು ವಿಧಾನಸೌಧದ ಮುಂಭಾಗ ಸನ್ಮಾನ ಮಾಡುವ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಚರಿಸುವ ದುಡುಕಿನ ನಿರ್ಧಾರ ಕೈಗೊಂಡು, ಸೂಕ್ತ ಭದ್ರತೆಯ ನಿರ್ಲಕ್ಷ್ಯವನ್ನು ತೋರಿಸಿ, ಸುಮಾರು 11 ಜನರ ಸಾವು ಸಂಭವಿಸಿದ್ದು, 30 ಜನರಿಗಿಂತಲೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ.

ಈ ದುರಂತಕ್ಕೆ ಕಾರಣರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳು ಹಾಗೂ ಇತರರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ ಕಲಂ 106 ರ ಪ್ರಕಾರ ಮೊಕದ್ದಮೆ ದಾಖಲಿಸಿ, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

IP ಸೆಟ್‌ಗಳಿಗೆ ಉಚಿತ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧ: ಸಚಿವ ಕೆಜೆ.ಜಾರ್ಜ್

Leave a Reply

Your email address will not be published. Required fields are marked *