BBMP
Loading ...

Kumbhamela

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿ, ಕರ್ನಾಟಕದ ನಾಲ್ವರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಕನ್ನಡಿಗರಿಗೆ ನೆರವಾಗಲು ರಾಜ್ಯ ಸರ್ಕಾರದಿದಂ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ.

ಈ ಕುರಿತಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದು, ಉತ್ತರ ಪ್ರದೇಶದ ಸರ್ಕಾರದ ಪ್ರಕೃತಿ ವಿಕೋಪ ನಿರ್ವಹಣಾ ವಿಭಾಗದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಕಂದಾಯ ಇಲಾಖೆಯ ಎಸಿಎಸ್ ರಶ್ಮಿಯವರು ಈಗಾಗಲೇ ಯುಪಿ ಸರ್ಕಾರದ ಜೊತೆ ಮಾತನಾಡಿದ್ದಾರೆ. ಒಂದಿಬ್ಬರಿಗೆ ಗಾಯ ಆಗಿದೆ ಎಂಬ ಮಾಹಿತಿ ಇದೆ. ಯುಪಿ ಸರ್ಕಾರದಿಂದ ಇಲ್ಲಿಯ ತನಕ ಸಾವು ನೋವಿನ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನೂ ಕುಂಭಮೇಳದಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೇ, ಕಾಲ್ತುಳಿತದಲ್ಲಿ ಸಿಕ್ಕಿ ಗಾಯಗೊಂಡಿದ್ದರೇ ಅವರ ನೆರವಿಗೆ ಸರ್ಕಾರ ಧಾವಿಸಲಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆನ್ನು ಆರಂಭಿಸಲಾಗಿದ್ದು, ಸಂತ್ರಸ್ತರು ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

ಹೀಗಿದೆ ಕುಂಭಮೇಳದ ಸಂತ್ರಸ್ತರ ನೆರವಿಗಾಗಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿದಂತ ಸಹಾಯವಾಣಿ ಸಂಖ್ಯೆ +91 80-22340676

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಬೆಳಗಾವಿ ಮೂಲದ ತಾಯಿ-ಮಗಳು ದುರಂತ ಸಾವು!

Leave a Reply

Your email address will not be published. Required fields are marked *