BBMP
Loading ...

ಬೆಂಗಳೂರು:- ಎಫ್​ಐಆರ್ ದಾಖಲಾದ 2 ತಿಂಗಳ ಬಳಿಕ ಕೋವಿಡ್ ಹಗರಣದ ತನಿಖೆ ಹೊಣೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ.

ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಈ ಹಿಂದೆ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಬಿ‌ ಖಾತಾ ನಿವೇಶನದಾರರಿಗೆ ಬಿಗ್​ ಶಾಕ್​ ಕೊಟ್ಟ ಬಿಬಿಎಂಪಿ: ಎ ಖಾತಾ ಪ್ರಮಾಣ ಪತ್ರ ರದ್ದು

Leave a Reply

Your email address will not be published. Required fields are marked *