BBMP
Loading ...

ಬೆಂಗಳೂರು: ರಾಜ್ಯ ಸರ್ಕಾರವು ಕಂಬಳ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದ್ದು, ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ಆದೇಶ ಹೊರಡಿಸಿದೆ.

ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಬೇಡಿಕೆ ಸಲ್ಲಿಸಿದ್ದರು. ಸ್ವತಃ ಸ್ಪೀಕರ್ ಯುಟಿ ಖಾದರ್ ಕಂಬಳ ಪರ ಬ್ಯಾಟಿಂಗ್ ಮಾಡಿದ್ದರು. ಸರ್ಕಾರ ನೆರವು ಕೊಡದಿದ್ದರೆ ನಾವೇ ಹಣ ಸಂಗ್ರಹಿಸಿ ಕಂಬಳ ಮಾಡಲು ಗೊತ್ತು ಎಂದು ಚಾಟಿ ಬೀಸಿದ್ದರು.

ಯುಟಿ ಖಾದರ್ ಚಾಟಿ ಬೀಸಿದ ಬೆನ್ನಲ್ಲೇ ಕಂಬಳಕ್ಕೆ ಅನುದಾನ ಬಿಡುಗಡೆಗೆ ಸರ್ಕಾರ ಆದೇಶ ಮಾಡಿದೆ. ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಪ್ರವಾಸೋದ್ಯಮ ಸಚಿವ ಹೆಚ್​​ಕೆ ಪಾಟೀಲ್ ಆದೇಶ ಹೊರಡಿಸಿದ್ದಾರೆ. 2024- 25 ನೇ ಸಾಲಿನ 24 ಜೋಡು ಕರೆ ಕಂಬಳಗಳಿಗೆ ತಲಾ 5 ಲಕ್ಷ ರೂ. ಘೋಷಣೆಯಾಗಿದೆ.

ಕಂಬಳಕ್ಕೆ ಬೆಂಬಲವಾಗಿ ನಿಂತ ರಾಜ್ಯ ಸರ್ಕಾರಕ್ಕೆ ಕಂಬಳ ಸಮಿತಿ ಅಭಿನಂದನೆ ಸಲ್ಲಿಸಿದೆ. ಅದರೆ, ಪ್ರಮುಖ ಬೇಡಿಕೆ ಈಡೇರಿದ ಬೆನ್ನಲ್ಲೇ ಬಾಕಿ ಉಳಿದ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಕೇಳಿ ಬಂದಿದೆ.

ಮಹಾಲಕ್ಷ್ಮೀ ಲೇಔಟ್: ಪತ್ನಿಯನ್ನು ಓದಿಸಿ ಕೆಲಸಕ್ಕೆ ಸೇರಿಸಿದ್ದ ಪತಿ; ಆದ್ರೆ ರಿಜಿಸ್ಟ್ರಾರ್ ಜತೆ ಹೆಂಡತಿ ಅನೈತಿಕ ಸಂಬಂಧಕ್ಕೆ ಬೇಸತ್ತು ಗಂಡ ಆತ್ಮಹತ್ಯೆ!

Leave a Reply

Your email address will not be published. Required fields are marked *