BBMP
Loading ...

State Govt

ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿಯಲ್ಲಿ 37.74 ಕೋಟಿ ರೂ. ವಿದ್ಯುತ್ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸುವುದು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಸುವರ್ಣಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೈಶುಗರ್ ಕಾರ್ಖಾನೆ ಪಾವತಿಸಿಬೇಕಿದ್ದ 37.74 ಕೋಟಿ ವಿದ್ಯುತ್ ಶುಲ್ಕ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸಲು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.

ಸರ್ಕಾರದ ಈ ನಿರ್ಧಾರದಿಂದ `52.25 ಕೋಟಿ ವಿದ್ಯುತ್ ಬಿಲ್ ವಿವಾದ ಬಗೆಹರಿದಿದ್ದು, ಮೈಸೂರು ಆಡಳಿತ ಮಂಡಳಿ ಹಾಗೂ ರೈತರ ಚಿಂತೆ ದೂರಾಗುವಂತೆ ಮಾಡಿದೆ.

ತಮ್ಮ ಮನವಿಗೆ ಸ್ಪಂದಿಸಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಜಿಲ್ಲಾ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಆರ್ಥಿಕವಾಗಿ ತೊಂದರೆಯಲ್ಲಿದ್ದ ಸರಕಾರಿ ಸ್ವಾಮ್ಯದ ಈ ಕಾರ್ಖಾನೆಯನ್ನು ಉಳಿಸಿ, ರೈತರು ಬೆಳೆದಿರುವ ಕಬ್ಬು ನುರಿಸುವ ಕಾರ್ಯ ಆರಂಭಿಸಲು ಸಾಧ್ಯವಾಗುವಂತೆ ಚಾಮುಂಡೇಶ್ವರಿ ವಿದ್ಯುತ್ ಕಂಪನಿಗೆ ವಿದ್ಯುತ್ ಬಾಕಿ ಪಾವತಿಸಲು ನೆರವಾಗುವಂತೆ ಕಳೆದ ಜುಲೈ 5 ರಂದು ದಿನೇಶ್ ಗೂಳಿಗೌಡರು ಸಿಎಂ ಸಿದ್ದರಾಮಯ್ಯ ಅವರಿಗೆ ಖುದ್ದಾಗಿ ಮನವಿ ಸಲ್ಲಿಸಿದ್ದರು.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಬಿ.ಕೆಂಚಪ್ಪಗೌಡ ಆಯ್ಕೆ: 3 ವರ್ಷದಲ್ಲಿ 4ನೇ ಬಾರಿ ಅಧ್ಯಕ್ಷರು ಬದಲಾವಣೆ

Leave a Reply

Your email address will not be published. Required fields are marked *