BBMP
Loading ...

 ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಈ ಮೂಲಕ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ. ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್​ಗಳ ಜೊತೆ ಸಭೆ ನಡೆಸಿದ್ದೇನೆ. ನಾಲ್ಕೈದು ತಿಂಗಳಲ್ಲಿ ಎಲ್ಲಾ ರೈತರ ಅರ್ಜಿ ಇತ್ಯರ್ಥ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.

ಈ ಬಾರಿ ಬಗರ್​ ಹುಕಂ ಕಮಿಟಿಯಲ್ಲಿ ಸಕ್ರಮದ ಜೊತೆ ಸಾಗುವಳಿ ಚೀಟಿ ಮತ್ತು ಭೂಮಿ ಸರ್ವೆ ಮಾಡಿ ರೈತರ ಹೆಸರಿಗೆ ನೋಂದಣಿ ಕೂಡ ಮಾಡಿಕೊಡುತ್ತೇವೆ. ರೈತರ ಎಲ್ಲಾ ದಾಖಲೆಗಳನ್ನು ಡಿಜಿಟಲ್ ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಹಿಂದೆ ಭೂಮಿ ಮಂಜೂರಾಗಿ ಪೋಡಿ ದುರಸ್ತಿ ಆಗದ 10 ಲಕ್ಷ ಪ್ರಕರಣಗಳಿವೆ. ಇವರೆಲ್ಲರ ದುರಸ್ತಿ ಪ್ರಕ್ರಿಕೆಯೆಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಜಾತಿ ಜನಗಣತಿ ವರದಿ ಜಾರಿ ವಿಚಾರವಾಗಿ ಮಾತನಾಡಿ ಅವರು, ಪರ ವಿರೋಧ ಚರ್ಚೆ ಆಗಲಿ. ಯಾರಿಗೆ ಆಗಲಿ ಅಭಿಪ್ರಾಯ ಹೇಳುವ ಅವಕಾಶ ಇದೆ. ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ಹೇಳುತ್ತೇವೆ. ನಾನು ನನ್ನ ಅಭಿಪ್ರಾಯ ಸಭೆಯಲ್ಲಿ ಹೇಳುತ್ತೇನೆ ಎಂದರು.

Leave a Reply

Your email address will not be published. Required fields are marked *