BBMP
Loading ...

BESCOM

Greater Bengaluru News9 : ಮನೆ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ ಸ್ಥಾಪಿಸಲು ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯ ಮೂಲಕ ಸಾರ್ವಜನಿಕರಿಗೆ ಬೆಸ್ಕಾಂ ಸಬ್ಸಿಡಿ ನೀಡುತ್ತಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.

ಗ್ರಾಹಕರು ತಮ್ಮ ಮನೆಯ ಮೇಲ್ಛಾವಣಿಯ ಮೇಲೆ 2025ರ ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಸೌರ ಫಲಕ ಅಳವಡಿಸಿ ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಬಹುದು.

ಈ ಯೋಜನೆಗೆ ಕೇಂದ್ರ ಸರ್ಕಾರವು 1kW ಗೆ 30,000ರೂ. 2kW ಗೆ 60,000 ರೂ. ಮತ್ತು 3kW ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯಕ್ಕೆ ಗರಿಷ್ಠ 78,000 ರೂ. ಸಬ್ಸಿಡಿ ನೀಡುತ್ತಿದೆ.

ಆಸಕ್ತರು ಸೂರ್ಯಘರ್ ಯೋಜನೆಗೆ ಈ ಲಿಂಕ್ ಮೂಲಕ https://pmsuryaghar.gov.in ನೋಂದಾಯಿಸಿಕೊಳ್ಳಬಹುದು ಹಾಗೂ ಬೆಸ್ಕಾಂನ ಸೋಲಾರ್ ಸಹಾಯವಾಣಿ ಸಂಖ್ಯೆ 080-22340816 ಕ್ಕೆ ಕರೆಮಾಡಬಹುದು.

Leave a Reply

Your email address will not be published. Required fields are marked *