BBMP
Loading ...

ಬೆಂಗಳೂರು: ತಹಶೀಲ್ದಾರ್ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಮತ್ತು ಆ ಅಧಿಕಾರವು ರಾಜ್ಯ ಜಾತಿ ಪರಿಶೀಲನಾ ಸಮಿತಿಗೆ ಮಾತ್ರ ಇದೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ತಮ್ಮ ಆದೇಶದಲ್ಲಿ, ತಹಶೀಲ್ದಾರ್ ಅರ್ಜಿಯನ್ನು ಸ್ವೀಕರಿಸಬಹುದು ಅಥವಾ ತಿರಸ್ಕರಿಸಬಹುದು ಎಂದು ಅಭಿಪ್ರಾಯಪಟ್ಟರು. “ತಹಶೀಲ್ದಾರ್ ಸಮಿತಿಯ ನಿರ್ದೇಶನವನ್ನು ಮಾತ್ರ ಜಾರಿಗೆ ತರುತ್ತಾರೆ” ಎಂದು ನ್ಯಾಯಾಧೀಶರು ತೀರ್ಪು ನೀಡಿದರು.

ತಾನು ಪಡೆದುಕೊಂಡಿದ್ದ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರ ರದ್ದುಪಡಿಸಿದ್ದ ತಹಸೀಲ್ದಾರ್‌ ಕ್ರಮ ಪ್ರಶ್ನಿಸಿ ಬೆಂಗಳೂರಿನ ಬಿನ್ನಿಪೇಟೆ ನಿವಾಸಿ ಎಂ ಗಾಯಿತಿ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ಕುರಿತಂತೆ ಬೆಂಗಳೂರು ಉತ್ತರ ವಿಭಾಗದ ಉಪ ವಿಭಾಗಾಧಿಕಾರಿಯ ಮುಂದಿದ್ದ ಪ್ರಕ್ರಿಯೆಯನ್ನು ನ್ಯಾಯಪೀಠ ಇದೇ ವೇಳೆ ರದ್ದುಪಡಿಸಿದೆ. ಪ್ರಕರಣ ಸಂಬಂಧ ಕಾನೂನು ಪ್ರಕಾರ ಪರಿಹಾರ ಪಡೆಯಲು ಅರ್ಜಿದಾರರು ಮತ್ತು ಪ್ರತಿವಾದಿ ಗಾಯಿತ್ರಿ ಅವರಿಗೆ ಮುಕ್ತ ಅವಕಾಶವಿದೆ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ.

2015ರ ಜೂನ್ 30ರಂದು ಬೆಂಗಳೂರು ಉತ್ತರ ತಾಲ್ಲೂಕಿನ ತಹಶೀಲ್ದಾರ್ ಎಂ.ಗಾಯತ್ರಿ ಅವರಿಗೆ ಜಾತಿ ಪ್ರಮಾಣ ಪತ್ರ ನೀಡಿದ್ದರು. ಗಾಯತ್ರಿ ಅವರು ಎಸ್ಟಿ ಪ್ರಮಾಣಪತ್ರವನ್ನು ಮೋಸದಿಂದ ಪಡೆದಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಿವಾಸಿ ಬಿ.ಗುರುಪ್ರಸಾದ್ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ದೂರು ದಾಖಲಿಸಿದ್ದಾರೆ.

ಸರ್ಕಾರಿ ನೌಕರರಿಗೆ ಸೋಮವಾರ ಕಛೇರಿಗೆ ಹಾಜರಿ ಕಡ್ಡಾಯ

Leave a Reply

Your email address will not be published. Required fields are marked *