BBMP
Loading ...

Election

ಬೆಂಗಳೂರು: ಶೀಘ್ರವೇ ಸ್ಥಳೀಯ ಸಂಸ್ಥೆಗಳ ಮತ್ತು ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂದಿನ ಎರಡು ಮೂರು ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ. ಅದರ ಜೊತೆಗೆ ಶೀಘ್ರವೇ ಬಿಬಿಎಂಪಿ ಚುನಾವಣೆಯನ್ನು ಮಾಡುಲಾಗುವುದು ಎಂದರು.

ಈ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕಾಗಿದ್ದು, ಚುನಾವಣೆ ಕುರಿತು ನಾವು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಿದ್ದೇವೆ. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿಗಳಿಗೆ ಸಂಬಂಧಿಸಿದ ಮೀಸಲಾತಿ, ಕ್ಷೇತ್ರ ಮರು ವಿಂಗಡಣೆ ಕೆಲಸ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು.

Leave a Reply

Your email address will not be published. Required fields are marked *