BBMP
Loading ...

Election

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ನಡೆಯದ ತಾಲ್ಲೂಕು, ಜಿಲ್ಲಾ ಪಂಚಾಯತಿ ಚುನಾವಣೆ ಮುಂದಿನ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆ ಇದೆ.

3 ವರ್ಷಗಳಾದರೂ ಜಿ.ಪಂ., ತಾ.ಪಂ.ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ನ್ಯಾಯಾಂಗ ನಿಂದನೆ‌ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು.

ಈ ವೇಳೆ ಸರಕಾರದ ಪರವಾಗಿ ಮಾತನಾಡಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ಸರಕಾರ ನಡೆಸುವುದಾಗಿ ತಿಳಿಸಿದರು.

ಸರಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಹೇಳಿದರು. ಮೇ ತಿಂಗಳೊಳಗೆ ಮೀಸಲಾತಿ ನೀಡುವುದಾಗಿ ಸರಕಾರದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್, ಅರ್ಜಿಯನ್ನು ಇತ್ಯರ್ಥಪಡಿಸಿದೆ.

ನಿಷ್ಕ್ರಿಯ ಹಾಗೂ ನಷ್ಟದಲ್ಲಿರುವ ಒಟ್ಟು 49 ಕಂಪನಿಗಳನ್ನು ಬಂದ್​ ಮಾಡಲು ಮುಂದಾದ ರಾಜ್ಯ ಸರ್ಕಾರ

Leave a Reply

Your email address will not be published. Required fields are marked *