ಬೆಂಗಳೂರು: ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ 12ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ಸೆಪ್ಟೆಂಬರ್ 8ರ ಭಾನುವಾರದಂದು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಹಲವಾರು ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಡೆಸಿಕೊಡಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಸಂತೋಷ ಹೆಗ್ಡೆ, ಲಹರಿ ಆಡಿಯೋ ಸಂಸ್ಥೆಯ ಮಾಲೀಕರಾದ ಲಹರಿ ವೇಲು, ಸಂಭಾಷಣೆಕಾರರಾದ ಮಾಸ್ತಿ ಉಪ್ಪಾರಹಳ್ಳಿ, ಭೀಮಾ ಚಿತ್ರದ ನಟ ಡ್ರ್ಯಾಗನ್ ಮಂಜು, ಕೆಜಿಎಫ್ ಖ್ಯಾತಿಯ ಬಾಲ ನಟ ಅನ್ಮೋಲ್ ವಿಜಯ್, ಸೋಲ್ ಬೀಟ್ ಸಂಸ್ಥೆಯ ಪ್ರಕಾಶ್ ಅವರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರತಿಭೆಗಳನ್ನು ಗುರುತಿಸುವ ಕೆಲಸ ನಡೆಯಲಿದೆ ಎಂದು ಇದು ನಿಮ್ಮ ವಾಹಿನಿ ಕಲಾವೇದಿಕೆಯ ಸಂಸ್ಥಾಪಕರಾದ ಕಿಶೋರ್ ಕುಮಾರ್ ಅವರು ತಿಳಿಸಿದರು.


