Greater Bengaluru News9 : ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಐತಿಹಾಸಿಕ ಹಾಗೂ ಪ್ರಸಿದ್ಧ ಹಾಸನದ ಅಧಿದೇವತೆ ಶ್ರೀ ಹಾಸನಾಂಬಾ ದೇವಿಯ ದರ್ಶನೋತ್ಸವಕ್ಕೆ ಸಕಲ ಸಿದ್ಧತೆಗಳು ಆರಂಭವಾಗಿವೆ. ಅಕ್ಟೋಬರ್ ಅಂತ್ಯದಲ್ಲಿ ಆರಂಭವಾಗಲಿರುವ ಈ ಧಾರ್ಮಿಕ ಮಹೋತ್ಸವದ ವಿಶೇಷತೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ವರ್ಷದ ಬಹುಪಾಲು ದಿನಗಳ ಕಾಲ ಮುಚ್ಚಲ್ಪಟ್ಟಿ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾತ್ರ ಭಕ್ತರಿಗೆ ಮುಕ್ತವಾಗುವ ಹಾಸನಾಂಬೆ ದೇವಿಯ ದರ್ಶನವು ಈ ಬಾರಿ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಅಂದಾಜು ಎರಡು ವಾರಗಳ ಕಾಲ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಅಧಿಕೃತ ಪಂಚಾಂಗ ಹಾಗೂ ಜಿಲ್ಲಾಡಳಿತದ ಅಂತಿಮ ನಿರ್ಧಾರದಂತೆ ದರ್ಶನದ ದಿನಗಳು ಹಾಗೂ ನಿಖರ ಸಮಯ ಅಧಿಕೃತವಾಗಿ ಪ್ರಕಟಗೊಳ್ಳಲಿದೆ.
ದೇವಸ್ಥಾನದ ಸಂಪ್ರದಾಯದಂತೆ, ಬಾಗಿಲು ತೆರೆಯುವ ಮೊದಲ ದಿನ ಅಂದರೆ ಅಕ್ಟೋಬರ್ 29ರಂದು ಹಾಗೂ ಮುಕ್ತಾಯದ ದಿನವಾದ ನವೆಂಬರ್ 11ರಂದು ಕೇವಲ ಧಾರ್ಮಿಕ ವಿಧಿ-ವಿಧಾನಗಳು ಮತ್ತು ಆಚರಣೆಗಳು ಮಾತ್ರ ಜರುಗಲಿದ್ದು, ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ. ಉಳಿದ ದಿನಗಳಲ್ಲಿ ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆಯಲಿದ್ದಾರೆ.
ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸ್ಆ್ಯಪ್ ಗ್ರೂಪ್ಗೆ ಜಾಯಿನ್ ಆಗಿ: ಬಿಬಿಎಂಪಿ ನ್ಯೂಸ್9
ಕಳೆದ ವರ್ಷದಂತೆ ಈ ಬಾರಿಯೂ ಸಹ ರಾಜ್ಯ ಹಾಗೂ ಹೊರರಾಜ್ಯಗಳಿಂದ ಆಗಮಿಸುವ ಲಕ್ಷಾಂತರ ಭಕ್ತರಿಗೆ ಯಾವುದೇ ರೀತಿಯ ಅಡಚಣೆಯಾಗದಂತೆ ಜಿಲ್ಲಾಡಳಿತವು ಬಿಗಿ ಪೊಲೀಸ್ ಬಂದೋಬಸ್ತ್, ವಿಶೇಷ ಸರತಿ ಸಾಲಿನ ವ್ಯವಸ್ಥೆ, ಇ-ಪಾಸ್ ಹಾಗೂ ಆನ್‌ಲೈನ್ ಟಿಕೆಟ್ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧತೆ ನಡೆಸುತ್ತಿದೆ. ವರ್ಷದ ಹಿಂದೆ ಹಚ್ಚಿದ ದೀಪ ಹಾಗೂ ಇಟ್ಟ ಹೂವು ಎಂದಿಗೂ ಬಾಡJದ ವಿಸ್ಮಯದ ಹಿಂದಿನ ರಹಸ್ಯವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ.


