BBMP
Loading ...

Sarigama Viji

ಬೆಂಗಳೂರು : ಅನಾರೋಗ್ಯದಿಂದ ನಿನ್ನೆ ನಿಧನರಾಗಿರುವ ಸ್ಯಾಂಡಲ್ ವುಡ್ ಹಿರಿಯ ಹಾಸ್ಯ ನಟ ಸರಿಗಮ ವಿಜಿ ಅವರ ಅಂತ್ಯಕ್ರಿಯೆ ಇಂದು ಚಾಮರಾಜಪೇಟೆ ಬಳಿಯ ಚಿತಾಗಾರದಲ್ಲಿ ನಡೆದಿದೆ.

ಶ್ವಾಸಕೋಶದ ಸೋಂಕಿನಿಂದ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಜಿ ಅವರು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನರಾಗಿದ್ದಾರೆ. ಹಿರಿಯ ಕಲಾವಿದನ ನಿಧನಕ್ಕೆ ರಾಜಕೀಯ, ಸಿನಿಮಾ ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸರಿಗಮ ವಿಜಿ ಅಂತಿಮ ದರ್ಶನಕ್ಕೆ ವ್ಯವಸ್ಥೆಕ್ಕೆ ಮಾಡಲಾಗಿತ್ತು. ಬಳಿಕ ಚಾಮರಾಜಪೇಟೆಯ ಚಿತಾಗಾರದಲ್ಲಿ ಪುತ್ರ ಅಗ್ನಿ ಸ್ಪರ್ಶ ನೀಡುವ ಮೂಲಕ ಅಂತ್ಯಕ್ರಿಯೆ ನಡೆಸಿದ್ದಾರೆ.

ಸರಿಗಮ ವಿಜಿ ಎಂಬ ತಮ್ಮ ರಂಗನಾಮದಿಂದ ಕರೆಯಲ್ಪಡುವ ಆರ್. ವಿಜಯ್ಕುಮಾರ್ ಕನ್ನಡದ ಜನಪ್ರಿಯ ಹಾಸ್ಯ ನಟ, ಬರಹಗಾರರಾಗಿದ್ದಾರೆ. ವಿಜಿ ನಟನಾಗಿ ಚೊಚ್ಚಲ ಕನ್ನಡ ಚಲನಚಿತ್ರ ಬೆಳುವಲದ ಮಡಿಲಲ್ಲಿ (1975) ಬಂದಿತು. 2018 ರ ಹೊತ್ತಿಗೆ ಅವರು ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಸಂಸಾರದಲ್ಲಿ ಸರಿಗಮ , ಅವರು ನಿರ್ದೇಶಿಸಿದ ಮತ್ತು ನಟಿಸಿದ ರಂಗಭೂಮಿ ನಾಟಕ, 1390 ಕ್ಕೂ ಹೆಚ್ಚು ಬಾರಿ ಪ್ರದರ್ಶನಗೊಂಡಿದೆ.

ಲಾಲ್ ಭಾಗ್ ಫ್ಲವರ್ ಶೋಗೆ ಸಿದ್ದರಾಮಯ್ಯ ಚಾಲನೆ: ಎಂಟ್ರಿ ಫೀ, ಆನ್ ಲೈನ್ ಬುಕಿಂಗ್ ಡೀಟೈಲ್ಸ್ ಇಲ್ಲಿದೆ…

Leave a Reply

Your email address will not be published. Required fields are marked *