BBMP
Loading ...

Lineman

Greater Bengaluru News9 : ವಿದ್ಯುತ್ ತಗುಲಿ ಲೈನ್‌ಮ್ಯಾನ್ ಒಬ್ಬರು ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತರನ್ನು ಬಿರೇಶ್ (31) ಎಂದು ಗುರುತಿಸಲಾಗಿದೆ.

ಬುಧವಾರ ಮಧ್ಯಾಹ್ನ ಸುಮಾರು 12 ಗಂಟೆಗೆ ಆಪರೇಟರ್ ಪವನ್ ಅವರಿಗೆ ಕರೆ ಮಾಡಿ ಎಲ್‌ಸಿ (ಲೈನ್ ಕ್ಲಿಯರೆನ್ಸ್) ಪಡೆಯಲಾಗಿತ್ತು. ಬಳಿಕ ಬಿರೇಶ್ ಮತ್ತು ಸಚಿನ್ ಎಂಬ ಇಬ್ಬರು ಲೈನ್‌ಮ್ಯಾನ್‌ಗಳು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಬಿರೇಶ್ ಅವರು ಡಿಪಿ ಮೇಲೆ ಏರಿ ಒಂದು ಜಂಪ್ ನೀಡಿದ್ದಾರೆ. ಎರಡನೇ ಜಂಪ್ ನೀಡುವಾಗ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆಯಾದರೂ, ಮಾರ್ಗಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಖಟಕ್ ಚಿಂಚೋಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *