BBMP
Loading ...

Towing

ಬೆಂಗಳೂರು:- ಕೆಲವು ರಸ್ತೆಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರಲು ನಗರದ ಪೊಲೀಸರು ಚಿಂತನೆ ನಡೆಸಿದ್ದಾರೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ನಗರ ಚಲನಶೀಲತೆ ಸವಾಲುಗಳು ಮತ್ತು ಪೊಲೀಸರ ಪಾತ್ರ’ ವಿಷಯದ ಮೇಲೆ ಪೊಲೀಸರು–ಸಂಪಾದಕರ ಜತೆಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

‘ದೆಹಲಿ ಬಿಟ್ಟರೆ ಬೆಂಗಳೂರಿನಲ್ಲೇ ಹೆಚ್ಚಿನ ಸಂಚಾರ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಇರುವ ವ್ಯವಸ್ಥೆಯಲ್ಲೇ ಸಂಚಾರ ಸುಧಾರಣೆಗೆ ಹಲವು ಕ್ರಮ ಕೈಗೊಳ್ಳಲಾಗಿದೆ. ಕಳೆದ ವರ್ಷ ಐದು ಸಂಚಾರ ಪೊಲೀಸ್‌ ಠಾಣೆ ಪ್ರಾರಂಭಿಸಲಾಗಿತ್ತು. ಅಗತ್ಯ ಬಿದ್ದರೆ ಇನ್ನಷ್ಟು ಸಂಚಾರ ಪೊಲೀಸ್ ಠಾಣೆ ಸ್ಥಾಪಿಸಲು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.

ವಾಹನ ಟೋಯಿಂಗ್ ಕಿರಿಕಿರಿಯಿಂದ ಪಾರಾಗಿದ್ದ ಬೆಂಗಳೂರು ನಾಗರಿಕರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸಂಚಾರ ದಟ್ಟಣೆ ನಿರ್ವಹಣೆ ದೃಷ್ಟಿಯಿಂದ ನಗರದಲ್ಲಿ ಮತ್ತೆ ಟೋಯಿಂಗ್ ಆರಂಭಿಸುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದದಾರೆ.

ಸಂಚಾರದಟ್ಟಣೆ ಹೆಚ್ಚು ಇರುವ ಕೆಲವು ರಸ್ತೆಗಳಲ್ಲಿ ಟೋಯಿಂಗ್ ವ್ಯವಸ್ಥೆ ಮರುಜಾರಿಗೆ ಚಿಂತನೆ ನಡೆಸಿದ್ದೇವೆ. ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸಲು ತಂತ್ರಜ್ಞಾನ ಬಳಕೆ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಸಮಸ್ಯೆ ಮುಂದುವರೆದಿದೆ. ಹೀಗಾಗಿ ಅಗತ್ಯ ಇದ್ದಲ್ಲಿ ಇನ್ನಷ್ಟು ಟ್ರಾಫಿಕ್ ಪೊಲೀಸ್ ಸ್ಟೇಷನ್​ಗಳನ್ನು ಆರಂಭಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಬಿಬಿಎಂಪಿ ನೌಕರನಿಂದ ಐಎಎಸ್ ಅಧಿಕಾರಿಗಳ ನಕಲಿ ಸಹಿ: ಚಿಕ್ಕಪೇಟೆ ವಾರ್ಡ್​ನ ಕಿರಿಯ ಆರೋಗ್ಯ ಪರಿವೀಕ್ಷಕನ ವಿರುದ್ಧ ದೂರು

Leave a Reply

Your email address will not be published. Required fields are marked *