BBMP
Loading ...

Metro

ಬೆಂಗಳೂರು: ನಗರದಲ್ಲಿನ ನಮ್ಮ ಮೆಟ್ರೋ ಸೇವೆಯಲ್ಲಿ ನಾಳೆಯಿಂದ ಹಸಿರು ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ನಾಳೆ ಸೇರಿದಂತೆ ವಿವಿಧ ದಿನಾಂಕಗಳಂದು ಐದು ದಿನಗಳ ಕಾಲ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ.

ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು, ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದಿದೆ. ಈ ಕೆಳಗಿನ ವಿವರಗಳಂತೆ, ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ.

ದಿನಾಂಕ 20, 23, 30ನೇ ಆಗಸ್ಟ್ 2024 ಹಾಗೂ 6 ಮತ್ತು 11ನೇ ಸೆಪ್ಟೆಂಬರ್ 2024 ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ.

ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:
* ದಿನಾಂಕ 24ನೇ ಆಗಸ್ಟ್ 2024 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಕ್ಕೆ ಬದಲಾಗಿ 10.00 ಗಂಟೆಗೆ ಪ್ರಾರಂಭವಾಗಲಿದೆ.
* ದಿನಾಂಕ 25ನೇ ಆಗಸ್ಟ್ 2024 ರಂದು ಮೊದಲ ರೈಲು ಸೇವೆಯು ಬೆಳಿಗ್ಗೆ 5.00 ಕ್ಕೆ ಬದಲಾಗಿ 06.00 ಕ್ಕೆ ಪ್ರಾರಂಭವಾಗಲಿದೆ.

ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ:

* ದಿನಾಂಕ 24ನೇ ಆಗಸ್ಟ್ 2024 ರಂದು ಕೊನೆಯ ರೈಲು ಸೇವೆಯು ರಾತ್ರಿ 11.12 ಕ್ಕೆ ಪ್ರಾರಂಭವಾಗಲಿದೆ.
* ದಿನಾಂಕ 25ನೇ ಆಗಸ್ಟ್ 2024 ರಂದು ಮೊದಲ ರೈಲು ಸೇವೆಯು ಬೆಳಿಗ್ಗೆ 05.00 ಕ್ಕೆ ಪ್ರಾರಂಭವಾಗಲಿದೆ.

ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದಾಗಿ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್​​​

Leave a Reply

Your email address will not be published. Required fields are marked *