BBMP
Loading ...

Bribe

Greater Bengaluru News9 : ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಇಬ್ಬರು ಅಧಿಕಾರಿಗಳನ್ನು ಹಣದ ಜೊತೆಗೆ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಅಧಿಕಾರಿಗಳು ಕೆಬಿಜೆಎನ್‌ಎಲ್ ಕೆನಾಲ್‌ನ 3,71,419 ರೂ. ಬಿಲ್ ಪಾವತಿಗಾಗಿ 18 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ತಿಳಿದುಬಂದಿದೆ.

ಕೆಬಿಜೆಎನ್‌ಎಲ್ ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೇವುಲಾಲ್ ಚವ್ಹಾಣ 10 ಸಾವಿರ ರೂ.ಗೆ ಹಾಗೂ ಇನ್ನೊಂದು ಉಪವಿಭಾಗದ ಕಿರಿಯ ಅಭಿಯಂತರ ಸಾತಲಿಂಗಪ್ಪ ರೂಡಗಿ 8 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ನಾನಾಸಾಹೇಬ್ ರೂಡಗಿ ದೂರು ನೀಡಿದ್ದರು. ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರು ಲಂಚಕೋರರನ್ನ ಬಂಧಿಸಿದ್ದಾರೆ.

ಈ ಸಂಬಂಧ ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಇಬ್ಬರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave a Reply

Your email address will not be published. Required fields are marked *