BBMP
Loading ...

ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಡಿಸೆಂಬರ್.31ರಂದು ರಾತ್ರಿ 11ರಿಂದ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಈ ಕುರಿತಂತೆ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂಎನ್ ಅನುಚೇತ್ ಅವರು ಹೊಸ ವರ್ಷಾಚರಣೆ ನಿಮಿತ್ತ ಬೆಂಗಳಊರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಅಪಘಾತಗಳು ಸೇರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಡಿಸೆಂಬರ್.31ರಂದು ರಾತ್ರಿ 11ರಿಂದ ಜನವರಿ 1ರ ಬೆಳಿಗ್ಗೆ 6ರವರೆಗೆ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದಿದ್ದಾರೆ.

ಹೊಸ ವರ್ಷಾಚರಣೆಗೆ ಭರ್ಜರಿ ಸಿದ್ಧತೆ.. ರೂಲ್ಸ್‌ ಜಾರಿ ಮಾಡಿದ ಬಿಬಿಎಂಪಿ.. ಜಿಲ್ಲಾಡಳಿತ

Leave a Reply

Your email address will not be published. Required fields are marked *