ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ನೂತನ ಉಪ ಕುಲಪತಿಗಳಾದ ಶ್ರೀಯುತ ಡಾ. ಭಗಾವಾನ್ ಅವರು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿರುವ ನಂಜಾವಧೂತ ಸ್ವಾಮಿಜಿಗಳನ್ನೂ ಭೇಟಿ ಮಾಡಿ ಆಶೀರ್ವಾದ ಪಡೆದರು.

ನಮ್ಮ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಬಗ್ಗೆ ಶ್ರೀಗಳು ಬಹಳ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವಿಶ್ವವಿದ್ಯಾಲಯ ರಾಜ್ಯದಲ್ಲಿ ಮತ್ತು ರಾಷ್ಟ್ರಮಟ್ಟದಲ್ಲಿ ಇನ್ನು ಬೆಳೆಯಲಿ ಎಂದು ಆಶೀರ್ವದಿಸಿದ್ದಾರೆ.

ವಿಶ್ವವಿದ್ಯಾಲಯ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಮತ್ತು ರಾಜ್ಯದ ಜನತೆಗೆ ಸೇವೆ ನೀಡುವಂತೆ ಹಾಗೂ ಮಕ್ಕಳಿಗೆ ಆರೋಗ್ಯ ಶಿಕ್ಷಣ ಅದರಲ್ಲೂ ಬಡಮಕ್ಕಳಿಗೆ ಆರೋಗ್ಯ ಶಿಕ್ಷಣ ತಲುಪುವಂತೆ ನೋಡಿಕೊಳ್ಳಬೇಕೆಂದು ಶ್ರೀಗಳು ನಿರ್ದೇಶನ ನೀಡಿದ್ದಾರೆ. ಅದರಂತೆ ಕಾರ್ಯನಿರ್ವಹಿಸುವುದಾಗಿ ಭಗಾವಾನ್ ಅವರು ತಿಳಿಸಿದ್ದಾರೆ.
ಇದೇ ಭಾನುವಾರ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ವಜ್ರ ಮಹೋತ್ಸವ ಸಮಾರಂಭ


