BBMP
Loading ...

Vijayalakshmi

Greater Bengaluru News9 : ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರುದ್ಧ ಅವಾಚ್ಯ ಹಾಗೂ ನಿಂದನಾತ್ಮಕ ಕಮೆಂಟ್‌ಗಳನ್ನು ಪೋಸ್ಟ್ ಮಾಡಿರುವ ಖಾತೆಗಳ ವಿರುದ್ಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಂದ ಹೇಟ್ ಕಮೆಂಟ್ ಹಾಗೂ ಮೆಸೇಜ್​​ಗಳ ಸ್ಕ್ರೀನ್​ಶಾಟ್​​ಗಳನ್ನು ಸೈಬರ್ ಪೊಲೀಸರಿಗೆ ನೀಡುವುದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ.

ವಿಜಯಲಕ್ಷ್ಮೀ ಖಾತೆಗೆ ಬಂದ ಕಾಮೆಂಟ್​​ಗಳು ಸುದೀಪ್ ಅಭಿಮಾನಿಗಳದ್ದೇ ಎಂಬ ಅನುಮಾನ ಮೂಡಿದೆ. ಏಕೆಂದರೆ ಕೆಲವು ಖಾತೆಗಳು ಸುದೀಪ್ ಅಭಿಮಾನಿಗಳ ಹೆಸರಲ್ಲಿ ಇದೆ. ಇನ್ನೂ ಕೆಲವರು ಸುದೀಪ್ ಹೆಸರು ಬಳಸಿದ್ದಾರೆ. ಇನ್ನೂ ಕೆಲವರು ಸುದೀಪ್ ಸ್ಟಿಕ್ಕರ್ ಬಳಸಿದ್ದಾರೆ. ಇವರ ಪೈಕಿ ಎಷ್ಟು ಮಂದಿ ನಿಜವಾದ ಸುದೀಪ್ ಅಭಿಮಾನಿಗಳು ಎಂಬುದು ತನಿಖೆ ಬಳಿಕವೇ ತಿಳಿಯಬೇಕಿದೆ.

ಈ ಮೊದಲು ರಮ್ಯಾ ಅವರು ಇದೇ ರೀತಿಯ ಕ್ರಮ ಕೈಗೊಂಡಿದ್ದರು. ತಮಗೆ ಬಂದ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್​​ಗಳನ್ನು ನೀಡಿ ದೂರು ದಾಖಲಿಸಿದ್ದರು. ಕೆಲ ದರ್ಶನ್ ಅಭಿಮಾನಿಗಳನ್ನು ಕೇಸ್​​ನಲ್ಲಿ ಅರೆಸ್ಟ್ ಮಾಡಲಾಗಿತ್ತು.ಸುದೀಪ್ ಅವರು ಇತ್ತೀಚೆಗೆ ‘ಸಿನಿಮಾ ರಿಲೀಸ್ ವೇಳೆ ಒಂದು ಪಡೆ ಯುದ್ಧಕ್ಕೆ ರೆಡಿ ಇದೆ’ ಎಂದಿದ್ದರು.

ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ ಮಾತು ಎಂದು ಬಣ್ಣಿಸಲಾಯಿತು. ಆ ಬಳಿಕ ವಿಜಯಲಕ್ಷ್ಮೀ ಅವರು ನೇರವಾಗಿ ಅಖಾಡಕ್ಕೆ ಇಳಿದು, ಸುದೀಪ್​​ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು. ಆ ಬಳಿಕ ಪರ-ವಿರೋಧ ಚರ್ಚೆಗಳು ನಡೆಯುತ್ತಲೇ ಇದ್ದವು. ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ವಿಜಯಲಕ್ಷ್ಮೀ ಅವರಿಗೆ ಹೇಟ್ ಕಮೆಂಟ್ ಹೆಚ್ಚಿದೆ.

Leave a Reply

Your email address will not be published. Required fields are marked *