BBMP
Loading ...

Civil Workerd

ಬೆಂಗಳೂರು : ಬೆಂಗಳೂರು ನಗರದಲ್ಲಿ ಪೌರ ಕಾರ್ಮಿಕರ ಮೇಲೆ ತಾಯಿ, ಮಗ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಎದುರು ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸೆಪ್ಟೆಂಬರ್‌ 11 ರಂದು ಬೆಂಗಳೂರು ಪಶ್ಚಿಮ ಬ್ಯಾಡರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಚಂದ್ರ ಎನ್ನುವವರು ಹಾಗೂ ಅವರ ತಾಯಿ ಮಗ ಸೇರಿ ಬಿಬಿಎಂಪಿಯ ಮಹಿಳಾ ಪೌರಕಾರ್ಮಿಕರ ಮೇಲೆ ಜಾತಿ ನಿಂದನೆ, ಹಲ್ಲೆ ಮಾಡಿದ್ದಾರೆ. ಈ ವೇಳೆ ಪೌರಕಾರ್ಮಿಕರಿಗೆ ಗಾಯಗಳಾಗಿದ್ದು, ಅವರಲ್ಲಿ ಒಬ್ಬರಾದ ಲಕ್ಷ್ಮಿ ಎಂಬುವವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ಪೌರಕಾರ್ಮಿಕರ ಹಲ್ಲೆ ಖಂಡಿಸಿ ಬಿಬಿಎಂಪಿ ಮುಂಭಾಗ ಪೌರ ಕಾರ್ಮಿಕರು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್​ ಕೊಟ್ಟ ಗಡುವಿಗೆ ಬಿಬಿಎಂಪಿ ಅಲರ್ಟ್: 6000 ರಸ್ತೆ ಗುಂಡಿ ಮುಚ್ಚಿದ ಪಾಲಿಕೆ!

Leave a Reply

Your email address will not be published. Required fields are marked *