BBMP
Loading ...

Police Suspend

Greater Bengaluru News9 : ಅಮಾನತುಗೊಂಡ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಶಿಕ್ಷಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂದೇಶ್ ವಿರುದ್ದ ಹೊಸ ಎಫ್ಐಆರ್ ದಾಖಲಾಗಿದೆ. ಇದೀಗ ಈ ಪ್ರಕರಣವನ್ನು ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ, ಹೈಕೋರ್ಟ್​, ಇನ್ಸ್‌ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ ಎಂದು ಸಂದೇಶ್​​ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ.

ಮಹಿಳೆ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದು ಕೋರಿ ಅಮಾನತುಗೊಂಡ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಇನ್ಸ್​ಪೆಕ್ಟರ್ ಪರ ವಕೀಲ ವಾದ ಮಾಡಿ, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು. ಇನ್ಸ್‌ಪೆಕ್ಟರ್ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಆಧಾರಗಳಿಲ್ಲ ಎಂದು ಹೇಳಿದರು.

ಇನ್ಸ್​​ಪೆಕ್ಟರ್ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಇನ್ಸ್‌ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ ಎಂದು ಖಾರವಾಗಿ ಪ್ರಶ್ನಿಸಿದ್ದು, ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ. ಅಲ್ಲದೇ ಅಲ್ಲಿಯವರೆಗೆ ಬಂಧಿಸದಂತೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಮೂಡಿಬಿದಿರೆ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್ ವಿರುದ್ದ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಬಿಎನ್ ಎಸ್ 376(2)(A)(1), 376(2)(n), 384, 506 ಅಡಿ ಎಫ್ಐಆರ್ ದಾಖಲಾಗಿದೆ. ಈಗಾಗಲೇ ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿದ ಆರೋಪ ಸಂದೇಶ್ ಮೇಲಿದೆ. ಇತ್ತೀಚೆಗೆ ಇಬ್ಬರು ಮಹಿಳೆಯರು ಮಾಡಿದ್ದ ಆರೋಪ ಬಾರಿ ಚರ್ಚೆಯಾಗಿತ್ತು. ಆದರೆ ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ಇದು ಪ್ರಚೋದಿತ ಹಾಗೂ ಸುಳ್ಳು ಆರೋಪ ಎಂದು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಶಿಕ್ಷಕಿಯೊಬ್ಬರು ದೂರು ನೀಡಿದ್ದು ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್, 2018 ರಿಂದ 2023ರ ವರೆಗೆ ಮನೆಗೆ ಬಂದು ಅತ್ಯಾಚಾರ ಮಾಡಿರುವುದಾಗಿ ಸ್ವತಃ ಶಿಕ್ಷಕಿ ಆರೋಪಿಸಿದ್ದಾರೆ. ಹಲವು ಕಾರಣಗಳನ್ನು ಹಿಡಿದು, ಕೆಲ ಪ್ರಕರಣಗಳ ಕುರಿತು ಬೆದರಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ. 2018 ರಿಂದ 2023ರವರೆಗೆ ಸತತ 5 ವರ್ಷಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ಜೀವ ಭಯ, ಮಾನ, ಕುಟುಂಬಸ್ಥರ ವಿರುದ್ಧವೂ ಬೆದರಿಕೆ ಹಾಕಿದ್ದ ಕಾರಣ ಮೌನವಾಗಿದ್ದೆ ಎಂದು ಶಿಕ್ಷಕಿ ದೂರಿನಲ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *