BBMP
Loading ...

Caste Census

Greater Bengaluru News9 : ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ನವೆಂಬರ್ ಕ್ರಾಂತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಹೇಳಿದ್ದಾರೆ.

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ, ಮಾತನಾಡಿದ ಸುರ್ಜೇವಾಲ, ಯಾರೂ ಪಕ್ಷದ ಚೌಕಟ್ಟನ್ನು ಮೀರಬಾರದು. ಕೆಲವರು ಇದನ್ನು ಮೀರಿ ಮಾತನಾಡಿದ್ದಾರೆ. ಈ ಬಗ್ಗೆ ಗಮನ ಹರಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ.

ಮತಗಳ್ಳತನದ ಪ್ರಕರಣಗಳ ಕುರಿತಾಗಿ ಸುರ್ಜೇವಾಲ ಮಾತನಾಡಿದ್ದು, ಮಹದೇವಪುರ ಮತ್ತು ಆಳಂದ ಕ್ಷೇತ್ರಗಳಿಗೆ ಸೀಮಿತವಾಗಿಲ್ಲ; ಬೇರೆ ಬೇರೆ ಕ್ಷೇತ್ರಗಳಲ್ಲೂ ಘಟನೆಗಳು ನಡೆದಿವೆ. ಮಹಾರಾಷ್ಟ್ರದಲ್ಲಿ ಮತಗಳ್ಳತನದ ದಾಖಲೆಯನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ.

ಬಿಜೆಪಿ ಸಂವಿಧಾನ ನೀಡಿದ ಹಕ್ಕನ್ನು ಕಿತ್ತುಕೊಳ್ಳುತ್ತಿರುವ ಕಾರಣ ಕಾಂಗ್ರೆಸ್ ‘ವೋಟ್ ಚೋರಿ’ ಅಭಿಯಾನ ನಡೆಸುತ್ತಿದೆ. ಬೆಂಗಳೂರಿನ ಪುಲಕೇಶಿ ನಗರದಲ್ಲಿ ರಾಜ್ಯ ಕಾಂಗ್ರೆಸ್ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ನಾನು ನೇತೃತ್ವದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಸುರ್ಜೇವಾಲ ಹೇಳಿದರು.

Leave a Reply

Your email address will not be published. Required fields are marked *