BBMP
Loading ...

E Khata BBMP

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕಂದಾಯ ಇಲಾಖೆ ಬ್ಯಾಟರಾಯನಪುರದಲ್ಲಿ ಭಾನುವಾರ ಆಯೋಜಿಸಿದ್ದ ಇ-ಖಾತಾ ಮೇಳಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇ-ಖಾತಾ ಮೇಳ ಮತ್ತು ಮನೆ-ಮನೆಗೆ ಇ-ಖಾತಾ ವಿತರಣಾ ಕಾರ್ಯಕ್ರಮದ ಸಂದರ್ಭದಲ್ಲಿ, 4,000 ಕ್ಕೂ ಹೆಚ್ಚು ಟೋಕನ್‌ಗಳನ್ನು ವಿತರಿಸಲಾಗಿದ್ದು, 1,679 ಅರ್ಜಿಗಳ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ. ಈ ಪೈಕಿ 677 ಅರ್ಜಿದಾರರು ತಮ್ಮ ಅಂತಿಮ ಇ-ಖಾತಾಗಳನ್ನು ಸ್ಥಳದಲ್ಲೇ ಸ್ವೀಕರಿಸಿದ್ದಾರೆ.

ಹೆಚ್ಚಿನ ನಾಗರಿಕರು ಸೇವೆಗಾಗಿ ಕಾಯುತ್ತಿರುವುದರಿಂದ, ಮೇಳವು ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಬಿಎಂಪಿ ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರು, “ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ, ಸಾರ್ವಜನಿಕರ ಖಾಸಗಿ ಆಸ್ತಿ ರಕ್ಷಣೆಗೆ ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿ ಸಾರ್ವಜನಿಕರ ಮನೆ ಬಾಗಿಲಿಗೆ ಖಾತಾ ನೀಡುವ ಕ್ರಾಂತಿಕಾರಿ ‘ಮನೆ ಮನೆಗೆ ಇ-ಖಾತಾ’ ಕಾರ್ಯಕ್ರಮಕ್ಕೆ ಪ್ರಾಯೋಗಿಕ ಚಾಲನೆ ನೀಡಿದ್ದೇವೆ ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಆಸ್ತಿಗಳಿದ್ದು, ಈ ಎಲ್ಲಾ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿ ನಿಮ್ಮ ಮನೆ ಬಾಗಿಲಿಗೆ ನೀಡುವಂತೆ ಕ್ರಾಂತಿಕಾರಿ ಬದಲಾವಣೆ ತರಲು ತೀರ್ಮಾನಿಸಿದ್ದೇನೆ. ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆ ಮಾಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಚಾಲನೆ ನೀಡುತ್ತಿದ್ದೇವೆ. ಜನರ ಹಿತ, ಬದುಕು ಹಾಗೂ ಆಸ್ತಿ ರಕ್ಷಣೆಗಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ನಾಳೆಯಿಂದ ಹೊಸ ವಿದ್ಯುತ್ ನಿಯಮ, ರಾಜ್ಯಾದ್ಯಂತ ಸ್ಮಾರ್ಟ್ ಮೀಟರ್‌ ಅಳವಡಿಕೆ ಆದೇಶ! ಇಲ್ಲಿಂದ ಕಂಪ್ಲೀಟ್​ ಮಾಹಿತಿ

Leave a Reply

Your email address will not be published. Required fields are marked *